ಉಡುಪಿ ಜಿಲ್ಲೆಯ 93 ಮಂದಿಗೆ ಕೊರೋನ ಸೋಂಕು

Update: 2021-09-17 15:47 GMT

ಉಡುಪಿ, ಸೆ.17: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 93 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ 202 ಮಂದಿ ಸೋಂಕಿನಿಂದ ಮುಕ್ತರಾದರೆ, ಸೋಂಕಿಗೆ ಇನ್ನೂ ಸಕ್ರಿಯರಾಗಿರುವವರ ಸಂಖ್ಯೆ 1516ಲ ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಸಹ ಜಿಲ್ಲೆಯಲ್ಲಿ ಯಾರೂ ಸೋಂಕಿನಿಂದ ಮೃತಪಟ್ಟಿಲ್ಲ. ಸೋಂಕು ದೃಢಪಟ್ಟ 93 ಮಂದಿಯಲ್ಲಿ 50 ಮಂದಿ ಪುರುಷರು ಹಾಗೂ 43 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 48 ಮಂದಿ ಉಡುಪಿ ತಾಲೂಕು, 18 ಮಂದಿ ಕುಂದಾಪುರ ಹಾಗೂ 27 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 10 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 83 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ 202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,578ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6220 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,554ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,76,789 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News