ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ, ರೈತರೊಂದಿಗೆ ಮಾತುಕತೆ ನಡೆಸಿ: ಅಮರಿಂದರ್ ಸಿಂಗ್

Update: 2021-09-17 17:16 GMT

ಮುಂಬೈ, ಸೆ. 17: ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್, ಇದಕ್ಕೆ ಸಂಬಂಧಿಸಿ ರೈತರೊಂದಿಗೆ ವಿಸ್ತೃತ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಸಂದರ್ಭ ಹಲವು ರೈತರು ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಿದ ಅಮರಿಂದರ್ ಸಿಂಗ್, ತನ್ನ ಪ್ರಮಾದಗಳನ್ನು ಅರಿತುಕೊಳ್ಳಲು ಹಾಗೂ ದೇಶದ, ರೈತರ ಹಿತಾಸಕ್ತಿ ಪರಿಗಣಿಸಿ ಕಾಯ್ದೆ ಹಿಂಪಡೆಯಲು ಕೇಂದ್ರ ಸರಕಾರಕ್ಕೆ ಇದು ಸಕಾಲ ಎಂದಿದ್ದಾರೆ. ಲುಧಿಯಾನದಲ್ಲಿ ಪಂಜಾಬ್ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮೂರನೇ ಕಿಸಾನ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಅಭಿವೃದ್ಧಿ ಹಾಗೂ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದ ರೈತರಿಗೆ ಇಂದು ಏನಾಗುತ್ತಿದೆ ಎಂದು ಗಮನಿಸಿದಾಗ ವಿಷಾದವಾಗುತ್ತದೆ ಎಂದು ಅವರು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News