ಮಾಜಿ ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೊ ತೃಣಮೂಲ ಕಾಂಗ್ರೆಸ್‌ ಗೆ ಸೇರ್ಪಡೆ

Update: 2021-09-18 09:55 GMT
Photo: Twitter/ShivAroor

ಕೋಲ್ಕತ್ತ: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮಾಜಿ ಸಂಸದ ಬಾಬುಲ್ ಸುಪ್ರಿಯೋ ಅವರು ಶನಿವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ'ಬ್ರೈನ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು indianexpress.com ವರದಿ ಮಾಡಿದೆ.

"ಇಂದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ'ಬ್ರೇನ್ ಅವರ ಸಮ್ಮುಖದಲ್ಲಿ, ಮಾಜಿ ಕೇಂದ್ರ ಸಚಿವ ಮತ್ತು ಹಾಲಿ ಸಂಸದ ಬಾಬುಲ್ ಸುಪ್ರಿಯೋ ತೃಣಮೂಲ ಕುಟುಂಬವನ್ನು ಸೇರಿಕೊಂಡರು. ಅವರಿಗೆ ಅತ್ಯಂತ ಆತ್ಮೀಯ ಸ್ವಾಗತವನ್ನು ನೀಡಲು ನಾವು ಈ ಅವಕಾಶವನ್ನು ಬಳಸಿಕೊಳ್ಳುತ್ತೇವೆ!” ಎಂದು ತೃಣಮೂಲ ಕಾಂಗ್ರೆಸ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಸುಪ್ರಿಯೋ ಅವರು ಇತ್ತೀಚೆಗೆ ನಡೆದ ಸಂಪುಟ ಪುನರ್ ರಚನೆಗೆ ಮುನ್ನವೇ ರಾಜೀನಾಮೆ ನೀಡಿದ್ದರು. ವಾರಗಳ ನಂತರ, ಅವರು ರಾಜಕೀಯದಿಂದ ನಿರ್ಗಮಿಸುವುದಾಗಿ ಘೋಷಿಸಿದ್ದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಕೆಲವು ಬಿಜೆಪಿ ನಾಯಕರೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರು ಎಂದು ಸುಪ್ರಿಯೋ ಹೇಳಿದ್ದರು. ಹಿರಿಯ ನಾಯಕರ ನಡುವಿನ 'ಒಳ ಜಗಳ' ಪಕ್ಷಕ್ಕೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದರು. ತನ್ನ ಆರಂಭಿಕ ಫೇಸ್ಬುಕ್ ಪೋಸ್ಟ್ ನಲ್ಲಿ, ಅವರು ಪ್ರತಿಸ್ಪರ್ಧಿ ರಾಜಕೀಯ ಪಕ್ಷವನ್ನು ಸೇರುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News