ಕಾಪು ಕಾಲೇಜಿಗೆ ಕರ್ಣಾಟಕ ಬ್ಯಾಂಕ್‍ನಿಂದ ಕುಡಿಯುವ ನೀರಿನ ಘಟಕ

Update: 2021-09-18 12:14 GMT

ಕಾಪು : ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ಲಿಮಿಟೆಡ್ ನೀಡಿದ ಕುಡಿಯುವ ನೀರಿನ ಶುದ್ದೀಕರಣ ಘಟಕವನ್ನು ಶನಿವಾರ ಉದ್ಘಾಟಿಸಲಾಯಿತು.

ಬ್ಯಾಂಕ್‍ನ ಉಡುಪಿ ಪ್ರಾದೇಶಿಕ ಕಛೇರಿಯ ಎಜಿಎಂ ಸಿ. ರಾಜಗೋಪಾಲ್ ಅವರು ಉದ್ಘಾಟಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ಣಾಟಕ ಬ್ಯಾಂಕ್ ನಿರಂತರವಾಗಿ ಸಹಾಯ-ಸಹಕಾರವನ್ನು ನೀಡುತ್ತಿದೆ. ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಒತ್ತು ನೀಡಿ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಲಾಗಿದ್ದು, ಮುಂದೆಯೂ ಆವಶ್ಯಕತೆಯುಳ್ಳ ಶಿಕ್ಷಣ ಸಂಸ್ಥೆಗಳಿಂದ ಬರುವ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಲು ಬ್ಯಾಂಕ್ ಸದಾ ಸಿದ್ಧವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಗ್ರಾಮೀಣ ಬಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಬ್ಯಾಂಕ್‍ ಗಳ ಸಹಕಾರ ಸ್ಮರಣೀಯವಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಬ್ಯಾಂಕ್‍ಗಳು ತ್ವರಿತ ಗತಿಯಲ್ಲಿ ಸಾಲ ನೀಡುವುದರ ಜೊತೆಗೆ, ಅವರಿಗೆ ಉದ್ಯೋಗ ಭದ್ರತೆಗೆ ಬೇಕಾಗುವ ತರಬೇತಿ ನೀಡಿ, ಬ್ಯಾಂಕಿಂಗ್ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶಗಳನ್ನು ಮಾಡಿಕೊಡು ವಂತೆ ಮನವಿ ಮಾಡಿದರು.

ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಜೇನಿಫರ್ ಲೋಲಿಟ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎ.ಜಿ.ಎಂ. ಸಿ. ರಾಜಗೋಪಾಲ್, ಕಾಪು ಯೋಜನಾ ಪ್ರಾ„ಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಗುತ್ತಿಗೆದಾರ ಕೆ. ಲಕ್ಷ್ಮೀಶ ತಂತ್ರಿ ಕಲ್ಯ, ಕಾಪು ಸರ್ಕಾರಿ ಪಾಲಿಟಿಕ್ನಿಕ್ ಕಾಲೇಜಿನ ಸಂಯೋಜಕ ಮಂಜುನಾಥ್ ಪ್ರಸಾದ್, ಕರ್ನಾಟಕ ಗೃಹ ಮಂಡಳಿಯ ಉಸ್ತುವಾರಿ ಸಹನಾ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News