ಹೊಸ ಶಿಕ್ಷಣ ನೀತಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪೂರಕ: ಶಾಸಕ ಲಾಲಾಜಿ ಆರ್. ಮೆಂಡನ್

Update: 2021-09-18 12:45 GMT

ಕಾಪು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಾನಾಂತರವಾಗಿ ಬೆಳೆಯಲು ಅನುಕೂಲವಾಗಲಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಶನಿವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ಗೃಹಮಂಡಳಿಯ ಮೇಲ್ವಿಚಾರಣೆಯಲ್ಲಿ ಸುಮಾರು 1.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಹೆಚ್ಚುವರಿ ಕೊಠಡಿಗಳು ಮತ್ತು ಪ್ರಯೋಗಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತಾನಾಡಿದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಮಾರು 6 ಕೋಟಿ ರೂಪಾಯಿಗೂ ಮಿಕ್ಕಿದ ಅನುದಾನದ ಬಳಕೆಯೊಂದಿಗೆ ಸರ್ವ ಸಜ್ಜಿತವಾಗಿ ಬೆಳೆದು ನಿಂತಿದೆ. ಗ್ರಾಮೀಣ ಪ್ರದೇಶದಲ್ಲಿ ಯುವಜನರಿಗೆ ಗುಣಮಟ್ಟದ ಶಿಕ್ಷಣವನ್ನು ದೊರಕಿಸುವ ಉದ್ದೇಶದೊಂದಿಗೆ ಇಲ್ಲಿ ಹೊಸ ಕೋರ್ಸ್‍ಗಳನ್ನು ಆರಂಭಿಸಲಾಗುತ್ತಿದ್ದು, ಉನ್ನತ ವ್ಯಾಸಂಗಕ್ಕೆ ಪೂರಕವಾಗಿಯೂ ಕಾಲೇಜನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು. 

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂದು ಸರ್ವರ ಸಹಕಾರದಿಂದಾಗಿ ಸುಸಜ್ಜಿತ ಕಾಲೇಜು ಕಾರಿಡಾರ್ ಆಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳು ಇಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಕಾಲೇಜಿಗೆ ಉತ್ತಮ ಫಲಿತಾಂಶ ತಂದು ಕೊಡಲು ಪ್ರಯತ್ನಿಸುವಂತೆ ಅವರು ಕರೆ ನೀಡಿದರು. 

ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಜೇನಿಫರ್ ಲೋಲಿಟ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎ.ಜಿ.ಎಂ. ಸಿ. ರಾಜಗೋಪಾಲ್, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಗುತ್ತಿಗೆದಾರ ಕೆ. ಲಕ್ಷ್ಮೀಶ ತಂತ್ರಿ ಕಲ್ಯ, ಕಾಪುಸ ರಕಾರಿ ಪಾಲಿಟಿಕ್ನಿಕ್ ಕಾಲೇಜಿನ ಸಂಯೋಜಕ ಮಂಜುನಾಥ್ ಪ್ರಸಾದ್, ಕರ್ನಾಟಕ ಗೃಹ ಮಂಡಳಿಯ ಉಸ್ತುವಾರಿ ಸಹನಾ ಮುಖ್ಯ ಅತಿಥಿಗಳಾಗಿದ್ದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರಿಣಾಕ್ಷಿ ದೇವಾಡಿಗ, ಪ್ರೆಸಿಲ್ಲಾ ನೊರೋನ್ಹಾ, ಸಂದೀಪ್ ಶೆಟ್ಟಿ, ಚಂದ್ರ ಮಲ್ಲಾರು, ಶೇಖ್ ನಜೀರ್, ಕಾಲೇಜಿನ ಭೋಧಕ ಮತ್ತು ಭೋಧಕೇತರ ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಲೋಕೇಶ್‍ನಾಥ್ ಬಿ. ವಂದಿಸಿದರು. ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸುಚಿತ್ರಾ ಎಸ್.ಆರ್. ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News