ಧ್ವೇಷಿಸುವವರನ್ನು ಪ್ರೀತಿಸುವ ಗುಣ ಆಸ್ಕರ್‌ ನವರಲ್ಲಿತ್ತು: ಮಧ್ವರಾಜ್

Update: 2021-09-18 13:35 GMT

ಉಡುಪಿ, ಸೆ.18: ತಾಳ್ಮೆ ಎಂಬುದು ಒಬ್ಬ ವ್ಯಕ್ತಿಯ ಬಹಳ ದೊಡ್ಡ ಆಸ್ತಿಯಾಗಿದೆ. ಅದನ್ನು 100ಕ್ಕೆ 100 ಗಳಿಸಿದ್ದು ಆಸ್ಕರ್ ಮಾತ್ರ. ರಾಜಕಾರಣಿ ಯಾಗಿ ತಾನು ಮಾಡಿದ ಕೆಲಸಕ್ಕೆ ಪ್ರಚಾರ ಬಯಸದೆ ಇದ್ದ ಏಕೈಕ ವ್ಯಕ್ತಿ ಆಸ್ಕರ್. ತಮ್ಮ ಜೀವಿತಾವಧಿಯಲ್ಲಿ ಯಾರಿಗೂ ನೋವು ಮಾಡಿದವರಲ್ಲ. ಧ್ವೇಷಿಸುವವ ರನ್ನು ಕೂಡ ಪ್ರೀತಿಸುವ ಗುಣ ಅವರಲ್ಲಿತ್ತು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶನಿವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಇತ್ತೀಚೆಗೆ ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅಪರ್ಣಾ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಸಮಾಜಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿದ ಆಸ್ಕರ್ ಫೆರ್ನಾಂಡಿಸ್‌ರನ್ನು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಸೀಮಿತಗೊಳಿಸದೆ ಅವರಿಗೆ ಪಕ್ಷಾತೀತ ಹಾಗೂ ಸಾರ್ವಜನಿಕ ವಾಗಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಬೇಕಾಗಿದೆ. ಅಲ್ಲದೆ ಪ್ರತಿ ಕಡೆ ಗಳಲ್ಲೂ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ ಎಂದರು.

ಕೇವಲ ಉಡುಪಿ ಜಿಲ್ಲೆಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಅವರು ಸಾಕಷ್ಟು ಬ್ರಹ್ಮಾವರ ಸಕ್ಕರೆ ಕಾರ್ಖಾನೆ, ಎಂಆರ್‌ಪಿಎಲ್, ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥ, ಮಲ್ಪೆ- ತೀರ್ಥಹಳ್ಳಿ ರಾ.ಹೆ.ಯಾಗಿ ಪರಿವರ್ತನೆ, ವಾರಾಹಿ ಯೋಜನೆ, ಕೊಂಕಣ ರೈಲ್ವೆ ಯಂತಹ ಮಹತ್ತರ ಯೋಜನೆ ಜಾರಿಯಲ್ಲೂ ಆಸ್ಕರ್‌ರ ಪಾತ್ರ ಪ್ರಮುಖವಾದುದು ಎಂದು ಅವರು ತಿಳಿಸಿದರು.

ಹಿರಿಯ ವಿಮರ್ಶಕ ಪ್ರೊ.ಮುರಲೀಧರ ಉಪಾಧ್ಯಾಯ, ನಿವೃತ್ತ ಶಿಕ್ಷಕ ಕುದಿ ವಸಂತ ಶೆಟ್ಟಿ, ನಿವೃತ್ತ ಉಪನ್ಯಾಸಕ ಡಾ.ಶ್ರೀಕಾಂತ ಸಿದ್ಧಾಪುರ, ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಕಾಂಗ್ರೆಸ್ ಮುಖಂಡರಾದ ಶ್ಯಾಮಲಾ ಭಂಡಾರಿ, ವೆರೋನಿಕಾ ಕರ್ನೇಲಿಯೋ, ಕೆದೂರು ಸದಾನಂದ ಶೆಟ್ಟಿ, ದೇವರಾಜ ಶೆಟ್ಟಿಗಾರ್, ನವೀನ್‌ಚಂದ್ರ ಜೆ ಶೆಟ್ಟಿ, ಮೈರ್ಮಾಡಿ ಸುಧಾಕರ ಶೆಟ್ಟಿ, ದೀಪಕ್ ಕೋಟ್ಯಾನ್, ರಾಜು ಪೂಜಾರಿ, ಭುಜಂಗ ಶೆಟ್ಟಿ, ಎಂ.ಪಿ.ಮೊದಿನಬ್ಬ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಪ್ರಖ್ಯಾತ್ ಶೆಟ್ಟಿ, ಬಿ.ಕುಶಲ್ ಶೆಟ್ಟಿ, ಜನಾರ್ದನ ತೋನ್ಸೆ, ಬಿ.ಹಿರಿಯಣ್ಣ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಉದ್ಯಾವರ ನಾಗೇಶ್ ಕುಮಾರ್, ಹಬೀಬ್ ಅಲಿ, ಯತೀಶ್ ಕರ್ಕೆರ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಬಿಪಿನ್‌ಚಂದ್ರ ಪಾಲ್ ನಕ್ರೆ, ಹರೀಶ್ ಶೆಟ್ಟಿ ಪಾಂಗಾಳ, ಸತೀಶ್ ಅಮೀನ್ ಪಡುಕೆರೆ, ದಿನಕರ ಹೇರೂರು, ಶಬ್ಬೀರ್ ಅಹ್ಮದ್, ರಮೇಶ್ ಕಾಂಚನ್, ಲೂಯೀಸ್ ಲೋಬೊ, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವರ್, ಅಮೃತ್ ಶೆಣೈ, ಇಸ್ಮಾಯಿಲ್ ಆತ್ರಾಡಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ್ ರಾವ್ ಕಿದಿಯೂರು ಹಾಗೂ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಎಚ್.ಹರಿಪ್ರಸಾದ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News