ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಗೆ ಇಬ್ಬರು ಮಹಿಳೆಯರು ಬಲಿ, 86 ಮಂದಿಗೆ ಕೊರೋನ ಸೋಂಕು

Update: 2021-09-18 14:15 GMT

ಉಡುಪಿ, ಸೆ.18: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಮಹಿಳೆಯರು ಮೃತ ಪಟ್ಟಿದ್ದು, 86 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ 201 ಮಂದಿ ಸೋಂಕಿನಿಂದ ಮುಕ್ತರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1399 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಉಡುಪಿ ತಾಲೂಕಿನ 45 ಮತ್ತು 65 ವರ್ಷ ಪ್ರಾಯದ ಇಬ್ಬರು ಮಹಿಳೆಯರು ಶನಿವಾರ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿನಿಂದ ಮೃತಪಟ್ಟಿದ್ದಾರೆ. ವಿಶೇಷವೆಂದರೆ ಇಬ್ಬರು ಮಹಿಳೆಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ 24 ಗಂಟೆಗಳೊಳಗೆ ಮೃತಪಟ್ಟಿದ್ದು. ತೀವ್ರ ಉಸಿರಾಟ ತೊಂದರೆಯೊಂದಿಗೆ ಕಿಡ್ನಿ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದಲೂ ಬಳಲುತಿದ್ದರು. ಇವರಿಬ್ಬರ ಸಾವಿನೊಂದಿಗೆ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಸಂಖ್ಯೆ 462ಕ್ಕೇರಿದೆ.

ದಿನದಲ್ಲಿ ಸೋಂಕು ದೃಢಪಟ್ಟ 86 ಮಂದಿಯಲ್ಲಿ 41 ಮಂದಿ ಪುರುಷರು ಹಾಗೂ 45 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 61 ಮಂದಿ ಉಡುಪಿ ತಾಲೂಕು, 19 ಮಂದಿ ಕುಂದಾಪುರ ಹಾಗೂ ಐವರು ಕಾರ್ಕಳ ತಾಲೂಕಿನವರು. ಇವರಲ್ಲಿ 15 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 71 ಮಂದಿಗೆ ವುನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ 201 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,779ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6316 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,640ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,83,105 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

4987 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಶನಿವಾರ 4987 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ 2316 ಮಂದಿಗೆ ಮೊದಲ ಡೋಸ್ ಹಾಗೂ 2671 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾಗಿದೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 1360 ಮಂದಿ ಮೊದಲ ಡೋಸ್ ಹಾಗೂ 1746 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದರೆ, 45 ವರ್ಷ ಮೇಲಿನ 956 ಮಂದಿ ಮೊದಲ ಡೋಸ್ ಹಾಗೂ 925 ಮಂದಿ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 8,71,700 ಮಂದಿಗೆ ಮೊದಲ ಡೋಸ್ ಹಾಗೂ 3,63,713 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾಗಿದೆ.

ಮೆಗಾ ಲಸಿಕಾ ಮೇಳದಲ್ಲಿ 50370ಮಂದಿಗೆ ಲಸಿಕೆ

ಜಿಲ್ಲೆಯಲ್ಲಿ ಶುಕ್ರವಾರ ನಡೆದ ಮೆಗಾ ಲಸಿಕಾ ಮೇಳದಲ್ಲಿ ಜಿಲ್ಲೆಯ ಒಟ್ಟು 308 ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಒಟ್ಟು 50370 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಜಿಲ್ಲೆಯ ಗುರಿಯಾದ 80,000 ಡೋಸ್ ಲಸಿಕೆ ವಿತರಣೆಯಲ್ಲಿ ಶೇ.63ನ್ನು ಸಾಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News