ಭಟ್ಕಳ: ಸಮುದ್ರ ಕಿನಾರೆಯಲ್ಲಿ ಇಬ್ಬರ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ
Update: 2021-09-18 21:41 IST
ಭಟ್ಕಳ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ಪುರುಷ ಹಾಗೂ ಮಹಿಳೆಯ ಮೃತದೇಹಗಳು ಪತ್ತೆಯಾಗಿದ್ದು ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿ ದೊರೆತ ದಾಖಲೆಯ ಪ್ರಕಾರ ಮೃತರನ್ನು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳಾದ ಆದಿತ್ಯ ಬಿ.ಎಸ್. (45) ಹಾಗೂ ಲಕ್ಷ್ಮೀ ಬಿ. ಎಂದು ಗುರುತಿಲಾಗಿದೆ.
ಇವರು ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದ್ದು, ಹುಯಿಲುಮಡಿಗೆ ಹೋಗಿ 2-3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ಕುರಿತಂತೆ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.