ಅಫ್ಘಾನ್ ನಲ್ಲಿ ಬಾಂಬ್ ಸ್ಫೋಟ: ಕನಿಷ್ಟ 2 ಸಾವು; 18ಕ್ಕೂ ಹೆಚ್ಚು ಮಂದಿಗೆ ಗಾಯ

Update: 2021-09-18 17:35 GMT

 ಕಾಬೂಲ್, ಸೆ.18: ಪೂರ್ವ ಅಫ್ಘಾನಿಸ್ತಾನದ ಜಲಾಲಾಬಾದ್ ನಗರದಲ್ಲಿ ಶನಿವಾರ ಸಂಭವಿಸಿದ ಪ್ರತ್ಯೇಕ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಕನಿಷ್ಟ 2 ಮಂದಿ ಮೃತಪಟ್ಟು 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಲಿಬಾನ್ ನ ವಾಹನಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದು, ಅಫ್ಘಾನ್ ನಲ್ಲಿ ತಾಲಿಬಾನ್ ಸರಕಾರ ಆಡಳಿತಕ್ಕೆ ಬಂದ ಬಳಿಕ ನಡೆದ ಮೊದಲ ಮಾರಣಾಂತಿಕ ದಾಳಿಯಾಗಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News