15 ದಿನದೊಳಗೆ ಬ್ರೈಲ್ ಪಠ್ಯಪುಸ್ತಕ ಪೂರೈಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2021-09-18 17:42 GMT

ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಅಂಧ ವಿದ್ಯಾರ್ಥಿಗಳಿಗೆ 15 ದಿನದೊಳಗೆ ಬ್ರೈಲ್ ಪಠ್ಯಪುಸ್ತಕಗಳನ್ನು ಪೂರೈಸುವಂತೆ ಹೈಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ.

ಇತ್ತೀಚಿಗೆ ದಿ ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್‍ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಈಗಾಗಲೇ ಆರಂಭಗೊಂಡಿರುವ ಹಿನ್ನೆಲೆ ತ್ವರಿತವಾಗಿ ರಾಜ್ಯದ ಎಲ್ಲ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಪಠ್ಯ ಪುಸ್ತಕಗಳನ್ನು ಪೂರೈಸಬೇಕೆಂದು ಸರಕಾರಕ್ಕೆ ನಿರ್ದೇಶಿಸಿದೆ. 

ಜತೆಗೆ, 107 ಪಠ್ಯಪುಸ್ತಕಗಳನ್ನು ಕೆಟಿಬಿಎಸ್ ವೆಬ್‍ಸೈಟ್‍ನಲ್ಲಿ ಇ-ಪಬ್ 3 ಮಾದರಿಯಲ್ಲಿ ಪ್ರಕಟಿಸಲಾಗಿರುವ ಕುರಿತ ವಸ್ತುಸ್ಥಿತಿ ವರದಿಯನ್ನು 2 ವಾರಗಳ ಒಳಗೆ ಕೋರ್ಟ್‍ಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಅ.7ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News