ಬೆಂಗಳೂರು: ನಕಲಿ ಕಂಪೆನಿಗಳ ಮೇಲೆ ಪೊಲೀಸರ ದಾಳಿ

Update: 2021-09-18 18:15 GMT

ಬೆಂಗಳೂರು, ಸೆ.18: ಪ್ರತಿಷ್ಠಿತ ಕಂಪೆನಿಗಳ ಹೆಸರಲ್ಲಿ ನಕಲಿ ಬ್ಯಾಗ್ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪ ಸಂಬಂಧ ಕೆಲ ಕಂಪೆನಿಗಳ ಮೇಲೆ ಪಶ್ಚಿಮ ವಿಭಾಗದ ಪೊಲೀಸರು ದಾಳಿ ನಡೆಸಿ ಶೋಧಿಸಿದರು.

ಕಾಪಿರೈಟ್ ಕಾಯ್ದೆ ಉಲ್ಲಂಘಿಸಿ ನಕಲಿ ಬ್ಯಾಗ್ ತಯಾರಿಸಿ ಮಾರಾಟ ಮಾಡುವುದರಿಂದ ಕಂಪೆನಿಗೆ ನಷ್ಟವಾಗಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. 

ಟ್ರೇಡರ್ಸ್ ಅಂಗಡಿಯಲ್ಲಿ ಪೂಮಾ ಕಂಪೆನಿ ಬ್ಯಾಗ್ ತಯಾರಿಸಿದ್ದು, ಅಕ್ರಮವಾಗಿ ಅಂಗಡಿ ಇಟ್ಟುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆ ಮೂಲಕ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಮಾಡುವ ಯೋಜನೆ ಇಟ್ಟುಕೊಂಡಿದ್ದರು. 
ಅಂಗಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ತಯಾರಾದ ಫೇಕ್ ಪ್ರಿಂಟ್‍ನ 70ಕ್ಕೂ ಅಧಿಕ ಬ್ಯಾಗ್ ವಶಕ್ಕೆ ಪಡೆದಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News