ಸೆ. 20ಕ್ಕೆ ಸಿಇಟಿ ಫಲಿತಾಂಶ ಪ್ರಕಟ

Update: 2021-09-19 15:00 GMT

ಬೆಂಗಳೂರು, ಸೆ. 19: `2020-2021ನೆ ಸಾಲಿನ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ(ಸೆ.20) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಆಗಸ್ಟ್ 28, 29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಮಧ್ಯಾಹ್ನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟ ಮಾಡಲಾಗುವುದು. ದಾಖಲೆಯ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ. ಸಿಇಟಿ ಫಲಿತಾಂಶವು ನಾಳೆ(ಸೆ.20) ಸಂಜೆ 4 ಗಂಟೆಯ ನಂತರ ಈ https://cetonline.karnataka.gov.in/kea/ ಲಿಂಕ್‍ನಲ್ಲಿ ಪ್ರಕಟವಾಗಲಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ kea.kar.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮಾ, ಡಿ-ಫಾರ್ಮಾ, ವೆಟರ್ನರಿ ಮತ್ತ ಫಾರ್ಮ್ ಸೈನ್ಸ್ ಸೇರಿದಂತೆ ಇತರೆ ಕೋರ್ಸ್‍ಗಳಿಗೆ ಪರೀಕ್ಷೆ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News