ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಿನ್ನೆಲೆ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಪೊಲೀಸ್ ವಶಕ್ಕೆ

Update: 2021-09-19 10:59 GMT
ರಾಜೇಶ್ ಪವಿತ್ರನ್

ಮಂಗಳೂರು, ಸೆ.19: ನಗರದ ಖಾಸಗಿ ಹೊಟೇಲೊಂದರಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್‌ನನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

''ಗಾಂಧೀಜಿಯನ್ನು ಹತ್ಯೆ ಮಾಡಲು ಸಾಧ್ಯವಾಗುತ್ತೆ ಎಂದ ಮೇಲೆ ನಿಮ್ಮ ವಿಚಾರದಲ್ಲಿ ಸಾಧ್ಯವಿಲ್ಲ ಅಂತೀರಾ?'' ಎಂದು ಪ್ರಶ್ನಿಸಿ ವಿವಾದ ಹುಟ್ಟು ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸಹಿತ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಇತರರ ಬಂಧನ ಇನ್ನೂ ಆಗಿಲ್ಲ ಎಂದು ಹೇಳಲಾಗಿದೆ.

ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ನೀಡಿದ ಹೇಳಿಕೆಯನ್ನು ನಾನು ಬೆಂಬಲಿಸುವೆ. ಅವರ ಸಹಿತ ಹಲವರ ವಿರುದ್ಧ ಬಿಜೆಪಿ ಪ್ರಕರಣ ದಾಖಲಿಸಿರುವುದು ಖಂಡನೀಯ, ಸುದ್ದಿಗೋಷ್ಠಿಯಲ್ಲಿಯೇ ಇಲ್ಲದ ನನ್ನಂತಹ ಹಲವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ರಾಜೇಶ್ ಪವಿತ್ರನ್ ರವಿವಾರ ವೀಡಿಯೋ ಮೂಲಕ ಆರೋಪಿಸಿದ್ದಾರೆ. ಅದಾದ ಕೆಲವೇ ಗಂಟೆಯೊಳಗೆ ರಾಜೇಶ್ ಪವಿತ್ರನ್‌ ನನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News