ಸೆ.20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Update: 2021-09-19 12:22 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ. 19: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ನಾಳೆ(ಸೆ.20) ಪ್ರಕಟವಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಾಳೆ ಬೆಳಗ್ಗೆ 11 ಗಂಟೆಯ ನಂತರ  www.karresults.nic.in ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಆಗಸ್ಟ್-ಸೆಪ್ಟೆಂಬರ್‍ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ನಾಳೆ ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ ನಂತರ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಲಾಗಿದೆ.

ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಆ ಪೈಕಿ 17,470 ಖಾಸಗಿ ಅಭ್ಯರ್ಥಿಗಳು, 351 ಪುನಃರಾವರ್ತಿತ ಅಭ್ಯರ್ಥಿಗಳು ಹಾಗೂ 592 ಮಂದಿ ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ ಪ್ರಥಮ ಪಿಯುಸಿ ಮತ್ತು ಎಸೆಸೆಲ್ಸಿಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಫಲಿತಾಂಶ ನೀಡಲಾಗಿತ್ತು. ಆದರೆ, ಕೆಲ ವಿದ್ಯಾರ್ಥಿಗಳು ಆ ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶವನ್ನು ನಾಳೆ ಪ್ರಕಟಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News