ಅಧಿವೇಶನದ ಬಳಿಕ ರಾಜ್ಯ ಪ್ರವಾಸ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-09-19 13:41 GMT

ದಾವಣಗೆರೆ: 'ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ರವಿವಾರ ದಾವಣಗೆರೆಯಲ್ಲಿ‌ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,  ರಾಜ್ಯ ಬಿಜೆಪಿ ಕಾರ್ಯಕಾರಣಿ  ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ ಎಂದರು.

'ದಾವಣಗೆರೆಯ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿಯಾಗಲು ಕಾರಣೀಭೂತರಾದ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ , ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ , ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಿಎಂ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು. 

'ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿದೆ.‌ ಇದರ ಯಶಸ್ಸು ಪಕ್ಷದ ಪ್ರತಿಯೊಬ್ಬ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲ್ಲುತ್ತದೆ' ಎಂದು ತಿಳಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News