ಸೆ.20: ಉಡುಪಿ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ

Update: 2021-09-19 14:32 GMT

ಉಡುಪಿ, ಸೆ.19:ಉಡುಪಿ ಜಿಲ್ಲೆಯಲ್ಲಿ ಸೆ.20ರ ಸೋಮವಾರ ಕೋವಿಡ್- 19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಸಮೀಪದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆ ಬಗ್ಗೆ ವಿಚಾರಿಸಿ, ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿದೆ. ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್- 150, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್-1000, ಕೋವ್ಯಾಕ್ಸಿನ್ 2ನೇ ಡೋಸ್-300 ಲಭ್ಯವಿದೆ.

ಕುಕ್ಕಿಕಟ್ಟೆ ಎಫ್‌ಪಿಎಐಯ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್-150, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-150 ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 15ರೊಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News