ಅಧಿಕಾರಿಗಳ ಸಾರ್ವಜನಿಕ ವರ್ತನೆಗೆ ತಡೆ ಒಡ್ಡಿದ ಸರಕಾರ

Update: 2021-09-20 06:55 GMT

ಬೆಂಗಳೂರು. ಸೆ.19: ಸರಕಾರಿ ಅಧಿಕಾರಿಗಳು ಪತ್ರಿಕಾಗೋಷ್ಠಿ, ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಇದರಿಂದ, ಸರಕಾರದ ಆಡಳಿತ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಲಿವೆ ಎನ್ನುವ ಕಾರಣ ನೀಡಿ, ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದಕ್ಕೆ ನಿಷೇಧ ಹೇರಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. 

ಅಧಿಕಾರಿಯು ನಂಬಿಕಾರ್ಹ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ, ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ. 

ಯಾರೇ ಸರಕಾರಿ ನೌಕರನು, ಆಕಾಶವಾಣಿ ಪ್ರಸಾರದಲ್ಲಾಗಲಿ ಅಥವಾ ದೂರದರ್ಶನದ ಕಾರ್ಯಕ್ರಮದಲ್ಲಾಗಲಿ ಅಥವಾ ಯಾವುದೇ ಸಾರ್ವಜನಿಕ ಮಾಧ್ಯಮದಲ್ಲಿ ವಾಸ್ತವ ಹೇಳಿಕೆ ಅಥವಾ ಅಭಿಪ್ರಾಯ ನೀಡುವುದಾಗಲಿ ಅವನ ಹೆಸರಿನಲ್ಲಿ, ಅನಾಮಧೇಯವಾಗಿ ಗುಪ್ತನಾಮದಲ್ಲಿ, ಬೇರೊಬ್ಬನ ಹೆಸರಿನಲ್ಲಿ ಪ್ರಕಟಿಸಲಾದ ಇತರ ಯಾವುದೇ ದಾಸ್ತಾವೇಜಿನಲ್ಲಿ ಅಥವಾ ಪತ್ರಿಕೆಗೆ ಬರೆದ ಯಾವುದೇ ಪತ್ರದಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸತಕ್ಕದ್ದಲ್ಲ ಎಂಬುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News