ಮಂಗಳೂರು : ಚಿನ್ನ ಅಕ್ರಮ ಸಾಗಾಟ ಯತ್ನ; ಆರೋಪಿ ಸೆರೆ
Update: 2021-09-19 22:06 IST
ಮಂಗಳೂರು, ಸೆ.19: ಇಲ್ಲಿನ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದು ಓರ್ವನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಬಂಟ್ವಾಳ ಅಜ್ಜಿನಡ್ಕ ನಿವಾಸಿ ಉಮರ್ ಫರೂಕ್ ಬಂಧಿತ ಆರೋಪಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರವಿವಾರ ದುಬೈನಿಂದ ಆಗಮಿಸಿದ ವಿಮಾನದಲ್ಲಿದ್ದ ಆರೋಪಿ 8.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಮುಂದಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.