ಬೇಕಲ್ ಉಸ್ತಾದರ ಪ್ರಥಮ ವಾರ್ಷಿಕ ಅನುಸ್ಮರಣಾ ಮಜ್ಲಿಸ್

Update: 2021-09-20 14:03 GMT

ಬ್ರಹ್ಮಾವರ, ಸೆ.20: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ತಾಜುಲ್ ಫುಖಹಾಅ ಖಾಝಿ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದರ ಪ್ರಥಮ ವಾರ್ಷಿಕ ಅನುಸ್ಮರಣಾ ಮಜ್ಲಿಸ್ ಕಾರ್ಯಕ್ರಮವು ಬಾರಕೂರಿನ ಮಾಲಿಕಿಬ್ನು ದೀನಾರ್ ಜುಮಾ ಮಸೀದಿಯಲ್ಲಿ ಇತ್ತೀಚೆಗೆ ಜರಗಿತು.

ಉಡುಪಿ ಜಿಲ್ಲಾ ಖಾಝಿ ಶೈಖುನಾ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಆಶೀರ್ವಚನ ನೀಡಿದರು. ರಾಜ್ಯ ಎಸ್‌ವೈಎಸ್ ಕಾರ್ಯದರ್ಶಿ ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ದಾವದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಧ್ಯಕ್ಷತೆಯನ್ನು ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು ವಹಿಸಿದ್ದರು. ಕುರಾನ್ ಪಾರಾಯಣ, ತಹ್ಲೀಲ್ ಸಮರ್ಪಣೆ, ಅನುಸ್ಮರಣಾ ಭಾಷಣ ಹಾಗೂ ಸಾಮೂಹಿಕ ಪ್ರಾರ್ಥನಾ ಮಜ್ಲಿಸ್ ನಡೆಯಿತು.

ಸಹಾಯಕ ಖಾಝಿ ಅಲ್‌ಹಾಜ್ ಅಬ್ದುರ್ರಹ್ಮಾನ್ ಮದನಿ, ಅಸ್ಸಯ್ಯಿದ್ ಜುನೈದ್ ಅರ್ರಿಫಾಯಿ ತಂಙಳ್, ಸೆಯ್ಯಿದ್ ಸಾಮಿರ್ ತಂಙಳ್, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಅಬ್ದುಲ್ಲತೀಫ್ ಮದನಿ ಬಾರಕೂರು, ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿ.ಎಸ್.ಎಫ್.ರಫೀಕ್ ಗಂಗೊಳ್ಳಿ, ಕಾರ್ಯದರ್ಶಿ ವೈ.ಬಿ.ಸಿ.ಬಶೀರ್ ಅಲಿ, ಕಾರ್ಯಾಧ್ಯಕ್ಷ ಸುಬ್ಹಾನ್ ಅಹ್ಮದ್ ಹೊನ್ನಾಳ, ಬಾರಕೂರು ಮಸೀದಿ ಅಧ್ಯಕ್ಷ ಖಾಸಿಂ ಬಾರಕೂರು, ವಕ್ಫ್ ಸಲಹಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಹಾಜಿ ಕೆ.ಪಿ.ಇಬ್ರಾಹಿಂ ಮಟಪಾಡಿ, ಮನ್ಸೂರ್ ಮೆಕ್ಕಾಸ್, ಹಂಝ ಕರ್ಕಿ ಗುಲ್ವಾಡಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಖಾಝಿ ಮಾಣಿ ಉಸ್ತಾದ್, ಕೋಟೇಶ್ವರ ತಂಙಳ್ ಮತ್ತು ಡಾ.ನೌಷಾದ್ ಕುಂಜಾಲು ಅವರನ್ನು ಸನ್ಮಾನಿಸಲಾಯಿತು. ಸುನ್ನೀ ಸಂಯುಕ್ತ ಜಮಾಅತ್ ಸಂಘಟನಾ ಕಾರ್ಯದರ್ಶಿ ಕೆ.ಎ.ರಝ್ವಿ ಕಲ್ಕಟ್ಟ ಸ್ವಾಗತಿಸಿ, ಪ್ರಾಸ್ತಾ ವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News