ವರ್ಗಾವಣೆ ಕಾಯ್ದೆ ರೂಪಿಸಲು ವಿಳಂಬ ಖಂಡಿಸಿ ಉಪನ್ಯಾಸಕರ ಧರಣಿ

Update: 2021-09-20 14:44 GMT

ಬೆಂಗಳೂರು, ಸೆ.20: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ರೂಪಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಉಪನ್ಯಾಸಕರು ಧರಣಿ ನಡೆಸಿದರು.

ಸೋಮವಾರ ನಗರದ ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಇಲಾಖೆಯ ಕೇಂದ್ರ ಕಚೇರಿಯ ಮುಂಭಾಗ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಉಪನ್ಯಾಸಕರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಸರಕಾರಿ ಪದವಿ ಕಾಲೇಜುಗಳಲ್ಲಿ ಹತ್ತಕ್ಕೂ ಅಧಿಕ ವರ್ಷಗಳಿಂದ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನಡೆದಿರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಸೇವಾ ಭದ್ರತೆ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

430 ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಸೇವಾ ಭದ್ರತೆಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಆದರೆ, ಇದುವರೆಗೂ ಸೇವಾ ಭದ್ರತೆಯನ್ನು ಘೋಷಿಸಿಲ್ಲ. ಇದರ ಪರಿಣಾಮ, ನಮ್ಮ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕೆಲವರ ವಯೋಮಿತಿ ಮೀರಿದೆ. ಸರಕಾರವು ಇಂದಲ್ಲ ನಾಳೆ ನಮ್ಮನ್ನು ಖಾಯಂಗೊಳಿಸುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎಸ್.ವಿ.ಸಂಕನೂರು, ಬೋಜೇಗೌಡ ಮತ್ತು ಹನುಮಂತಪ್ಪ, ನಿಮ್ಮ ಬೇಡಿಕೆಗಳ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇವೆ ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News