ರಾಜ್ಯದಲ್ಲಿ ಸೋಮವಾರ 677 ಮಂದಿಗೆ ಕೊರೋನ ದೃಢ, 24 ಮಂದಿ ಸಾವು

Update: 2021-09-20 14:50 GMT

ಬೆಂಗಳೂರು, ಸೆ.20: ರಾಜ್ಯದಲ್ಲಿ ಸೋಮವಾರ 677 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 24 ಜನರು ಸೋಂಕಿಗೆ ಬಲಿಯಾಗಿದ್ದು, 1,678 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,68,543ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,627ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 14,358ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

24 ಸೋಂಕಿತರು ಬಲಿ: ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 7, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಧಾರವಾಡ 1, ಹಾಸನ 3, ಕೋಲಾರ 1, ಉಡುಪಿ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 677 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಕಲಬುರಗಿ 3, ಕೊಡಗು 29, ಕೋಲಾರ 23, ಮಂಡ್ಯ 5, ಮೈಸೂರು 37, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡ ಜಿಲ್ಲೆಯಲ್ಲಿ 41 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 213 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 213 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,43,693 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,096 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,20,278 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News