ವಿಧಾನ ಪರಿಷತ್‍ನಲ್ಲಿ ವಿಧೇಯಕಗಳ ಅಂಗೀಕಾರ

Update: 2021-09-20 15:48 GMT

ಬೆಂಗಳೂರು, ಸೆ.20: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2021ನೆ ಸಾಲಿನ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪರವಾಗಿ ವಿಧಾನಪರಿಷತ್‍ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಡಿಸಿದರು. ನಂತರ ಸದಸ್ಯರು ಪರ್ಯಾವಲೋಚನೆ ನಡೆಸಿದ ನಂತರ ವಿಧೇಯಕ ಸದನದಲ್ಲಿ ಅಂಗೀಕಾರಗೊಂಡಿತು. 

ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕ 2021ಅನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಸಭೆಯ ಮುಂದೆ ಮಂಡಿಸಿದರು. ನಂತರ ಸದನದಲ್ಲಿ ವಿಧೇಯಕ ಅಂಗೀಕಾರಗೊಂಡಿತು. 

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೂರು ವಿಧೇಯಕಗಳಾದ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ 2021, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ 2021 ಹಾಗೂ ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ 2021 ಅನ್ನು ಸಭೆಯ ಮುಂದೆ ಮಂಡಿಸಿದರು. ಸದಸ್ಯರ ಪರ್ಯಾವಲೋಚನೆ ನಂತರ ಈ ವಿಧೇಯಕಗಳನ್ನು ಸದನದಲ್ಲಿ ಅಂಗೀಕಾರಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News