ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ?‌

Update: 2021-09-20 16:02 GMT

ಕೋಲ್ಕತಾ, ಸೆ. 20: ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಹಾಗೂ ಗುಜರಾತ್ ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಅವರು ಅಕ್ಟೋಬರ್ 2ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

ಈ ಮೊದಲು ಸೆಪ್ಟಂಬರ್ 28ರಂದು ಭಗತ್ ಸಿಂಗ್ ಜನ್ಮ ದಿನಚಾರಣೆಯಂದು ಅವರು ಕಾಂಗ್ರೆಸ್ ಸೇರ್ಪಡೆಗೆ ದಿನ ನಿಗದಿಪಡಿಸಲಾಗಿತ್ತು. ಗುಜರಾತ್ನ ವಡ್ಗಾಂವ್ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷನನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 

ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ವಿದ್ಯಾರ್ಥಿ ನಾಯಕ ಹಾಗೂ ಪ್ರಸಕ್ತ ಸಿಪಿಐಯಲ್ಲಿರುವ ಕನ್ಹಯ್ಯ ಕುಮಾರ್ ಅವರು ಇತರ ಕೆಲವು ಎಡರಂಗದ ನಾಯಕರೊಂದಿಗೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News