ಚಾಮರಾಜನಗರ: ಕೆರೆಗೆ ಈಜಾಡಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮತ್ಯು

Update: 2021-09-20 17:19 GMT

ಚಾಮರಾಜನಗರ: ಈಜಾಡಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತದಪಟ್ಟಿರುವ ಘಟನೆ ತಾಲೂಕಿನ‌ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ.

18 ವರ್ಷದ ವಿನೋದ್ ರಾಜ್  ಸಾವನ್ನಪ್ಪಿದ ಯುವಕನಾಗಿದ್ದು, ಸ್ನೇಹಿತರ ಜೊತೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ. ಈ ವೇಳೆ ಈಜಲು ಬಾರದೆ ಕೆರೆಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾನೆ ಎಂದು ಗೊತ್ತಾಗಿದೆ.

ಯುವಕ‌ನ  ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದ್ದು,  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News