ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಆರು ತಿಂಗಳಲ್ಲೇ ಕನಿಷ್ಠ

Update: 2021-09-20 18:11 GMT

ಚಂಡಿಗಢ, ಸೆ. 20: ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಐದನೇ ದಿನವಾದ ಸೋಮವಾರ ಕೂಡ 30 ಸಾವಿರದ ಗಡಿಯನ್ನು ದಾಟಿದೆ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.95ಕ್ಕೆ ಇಳಿಕೆಯಾಗಿದೆ. ಇದು ಕಳೆದ ಮಾರ್ಚ್ನ ಬಳಿಕ ದಾಖಲಾದ ಅತಿ ಕಡಿಮೆ ಪ್ರಕರಣವಾಗಿದೆ.

 ದೇಶದಲ್ಲಿ ಕಳೆದ ಕನಿಷ್ಠ 183 ದಿನಗಳಲ್ಲಿ 3,18,181 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳು ಸಂಖ್ಯೆ 13,977 ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷೆಗೆ ಒಳಗಾದ ಜನರಲ್ಲಿ 30,722 ಜನರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,34,78,419 ಏರಿಕೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News