ಬೆಂಗಳೂರು: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ ನ್ಯಾಯಾಂಗ ಬಂಧನ

Update: 2021-09-20 18:16 GMT
ಠಾಣೆಗೆ ರವಿವಾರ ಮುತ್ತಿಗೆ ಹಾಕಿದ ಸ್ಥಳೀಯರು

ಬೆಂಗಳೂರು, ಸೆ.20: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  23 ವರ್ಷದ ಯುವಕನೋರ್ವನನ್ನು ಇಲ್ಲಿನ ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಆರೋಪಿಯನ್ನು ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಹೇಳಿದರು.

ಬಾಲಕಿ ಪೋಷಕರು ನೀಡಿದ್ದ ದೂರು ಆಧರಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಲ್ಲದೆ, ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿರುವ  ಆರೋಪಿ, ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದ. 

20 ದಿನಗಳ ಹಿಂದಷ್ಟೇ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿದ್ದ ಸ್ನೇಹಿತರ ಕೊಠಡಿಗೆ ಬಂದಿದ್ದ. ರವಿವಾರ ಮಧ್ಯಾಹ್ನ ಪಕ್ಕದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ‌ ಎಂದು ಹೇಳಲಾಗುತ್ತಿದೆ.

ಇನ್ನೂ, ಈ ಸುದ್ದಿ ತಿಳಿದ ಸ್ಥಳೀಯರು  ಆಕ್ರೋಶಗೊಂಡು, ಸಂಜಯನಗರ ಠಾಣೆಗೆ ರವಿವಾರ ರಾತ್ರಿ ಮುತ್ತಿಗೆ ಹಾಕಿ ಆರೋಪಿಯನ್ನು ತಮಗೆ ನೀಡುವಂತೆ ಒತ್ತಾಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News