ಹಾವೇರಿ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

Update: 2021-09-21 06:45 GMT
ಸಾಂದರ್ಭಿಕ ಚಿತ್ರ (source: PTI)

ಹಾವೇರಿ, ಸೆ.21: ಹಾವೇರಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಯಾವುದೇ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ಹೊಗೆ ಆವರಿಸಿದ್ದರಿಂದ ಆತಂಕಿತರಾದ ಗರ್ಭಿಣಿ ಹಾಗೂ ಬಾಣಂತಿಯರು ಪುಟ್ಟ ಕಂದಮ್ಮಗಳನ್ನು ಎದೆಗವಚಿಕೊಂಡು ಆತಂಕದಿಂದ ಆಸ್ಪತ್ರೆಯಿಂದ ಹೊರಗಡೆ ಓಡಿದ್ದರು.

ಎಲೆಕ್ಟ್ರಿಕಲ್‌ ಎಂಸಿಬಿ ಬೋರ್ಡ್‌ನಲ್ಲಿ ಲೋಡ್‌ ಜಾಸ್ತಿಯಾಗಿ, ವಿದ್ಯುತ್‌ ಉಪಕರಣಗಳು ಸುಟ್ಟು ಹೋದ ಕಾರಣ ಈ ಅವಘಡ ಸಂಭವಿಸಿದೆಯೆನ್ನಲಾಗಿದೆ. ಇದರ ಪರಿಣಾಮ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News