ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

Update: 2021-09-21 13:40 GMT

ಉಡುಪಿ, ಸೆ.20: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಲೇಖಕರು, ಸಂಪಾದಕರು, ಪ್ರಕಾಶಕರು ಗಳಿಂದ ಕೃತಿಗಳನ್ನು ಆಹ್ವಾನಿಸಿದೆ. 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೀರದ ಜನಪದ ಗದ್ಯ, ಪದ್ಯ, ವಿಚಾರ-ವಿಮರ್ಶೆ-ಸಂಶೋಧನೆ, ಸಂಕೀರ್ಣ ಈ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಆಸಕ್ತರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು- 5660002 ಇವರಿಗೆ ಅಕ್ಟೋಬರ್ 11ರೊಳಗೆ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News