ತೆಂಕನಿಡಿಯೂರು: ಸಂಜೀವಿನಿ ವಾರದ ಸಂತೆಗೆ ಚಾಲನೆ

Update: 2021-09-21 14:14 GMT

ಉಡುಪಿ, ಸೆ.21: ಉಡುಪಿ ಜಿಪಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್ ಇಲಾಖೆ, ತಾಪಂ, ತೆಂಕನಿಡಿಯೂರು, ಕೆಮ್ಮಣ್ಣು ಬಡಾನಿಡಿ ಯೂರು, ಕಲ್ಯಾಣಪುರ ಗ್ರಾಪಂಗಳ ಮಹಿಳಾ ಸ್ವಸಹಾಯ ಸಂಜೀವಿನಿ ಒಕ್ಕೂಟದ ವತಿಯಿಂದ ತೆಂಕನಿಡಿಯೂರು ಗ್ರಾಪಂನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಸಂಜೀವಿನಿ ವಾರದ ಸಂತೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಡ್ರಮ್ ಭಾರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸಂಜೀವಿನಿ ಸಂಘಗಳು ವಿಶೇಷವಾಗಿ ಗ್ರಾಮೀಣ ಮಹಿಳೆಯರು ಹೊಸ ಜೀವನೋಪಾಯ ಕಂಡುಕೊಂಡು ಸಬ ಲೀಕರಣಗೊಳ್ಳಬೇಕು. ಅದಕ್ಕೆ ಅವರ ಆಸಕ್ತಿ ಮತ್ತು ಬೇಡಿಕೆಗೆ ಅನುಗುಣವಾಗಿ ಸಂಪೂರ್ಣ ಸಹಕಾರ ನೀಡುತ್ತೇವೆಂದು ಹೇಳಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಂಜೀವಿನಿ ಯೋಜನೆಗೆ ಸರಕಾರದಿಂದ ಬಹಳ ಸವಲತ್ತು ಗಳು ಮತ್ತು ಮಹಿಳೆಯರಿಗೆ ಆರ್ಥಿಕ ಬಲವರ್ಧನೆಗೆ ಪೂರಕವಾಗಿ ಯೋಜನೆ ಗಳು ಬರುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಸಹಾಯಕ ಯೋಜನಾಧಿಕಾರಿ ಜೇಮ್ಸ್ ಮತ್ತು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾದಿಕಾರಿ ವಿಜಯ ಉಪಸ್ಥಿತರಿದ್ದರು. ಅಧ್ಯಕ್ಷತೆ ಯನ್ನು ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಗಾಯತ್ರಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಬಡಾನಿಡಿಯೂರು ಗ್ರಾಪಂ ಅಧ್ಯಕ್ಷ ಪ್ರಭಾಕರ ತಿಂಗಳಾಯ, ಕೆಮ್ಮಣ್ಣು ಗ್ರಾಪಂ ಅಧ್ಯಕ್ಷೆ ಲತಾ, ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ಕೃಷ್ಣ ದೇವಾಡಿಗ ಮಾತನಾಡಿದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ. ಸ್ವಾಗತಿಸಿದರು. ಎನ್‌ಆರ್‌ಎಲ್ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಸಂಜೀವಿನಿ ಒಕ್ಕೂಟದ ಕೋಶಾಧಿಕಾರಿ ರಾಧಾ ವಂದಿಸಿದರು. ಸುಮಾರು 37ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನ ಗಳನ್ನು ಮಾರಾಟ ಈ ಪ್ರತ್ಯೇಕ ವಾರದ ಸಂತೆ ಪ್ರಾರಂಭಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News