ತುಂಬೆ: ಬಾಲ್ಯ ವಿವಾಹ ಆರೋಪ; ದೂರು ದಾಖಲು

Update: 2021-09-21 15:07 GMT

ಬಂಟ್ವಾಳ, ಸೆ.21: ತಾಲೂಕಿನ ತುಂಬೆ ಗ್ರಾಮದಲ್ಲಿ ಬಾಲ್ಯ ವಿವಾಹ ನಡೆದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ದೂರು ದಾಖಲಾಗಿದೆ. 

ತುಂಬೆಯ ದೇವಸ್ಥಾನ ಒಂದರಲ್ಲಿ ಅಪ್ರಾಪ್ತ ಬಾಲಕನಿಗೆ ವಿವಾಹ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. 

ಅಧಿಕಾರಿಗಳ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News