ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2021-09-21 15:10 GMT

ಉಡುಪಿ, ಸೆ.21: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪ್ರಥಮ ಪಿಯುಸಿ ಯಿಂದ ಪದವಿ ಹಾಗೂ ಉನ್ನತ ಪದವಿ/ಪಿಹೆಚ್‌ಡಿ ವಿದ್ಯಾರ್ಥಿಗಳು -ssp.postmatric.karnataka.gov.in/2021- ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.ರವಾಣಿ ಸಂ: 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News