ಹುಸೈನ್ ಕೆನರಾ

Update: 2021-09-21 15:14 GMT

ಪುತ್ತೂರು: ನಗರದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಮೂಲತ: ಕೂರ್ನಡ್ಕ ನಿವಾಸಿಯಾಗಿದ್ದು ಪ್ರಸ್ತುತ ನಗರದ ಹೊರವಲಯದ ಬನ್ನೂರು ಎಂಬಲ್ಲಿ ವಾಸವಾಗಿರುವ ಹುಸೈನ್ ಕೆನರಾ(68) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪುತ್ತೂರಿನ ಪ್ರತಿಷ್ಠಿತ ಅನ್ಸಾರುದ್ದೀನ್ ಜಮಾಅತ್ ಕಮಿಟಿಯಲ್ಲಿ ಹಲವಾರು ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

ಮೃತದ ದಫನ ಕಾರ್ಯ ಮಂಗಳವಾರ ಸಂಜೆ ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ