ಉಡುಪಿ: ಕೋವಿಡ್ ಗೆ ಓರ್ವ ಬಲಿ, 73 ಮಂದಿಗೆ ಕೊರೋನ ಪಾಸಿಟಿವ್

Update: 2021-09-21 15:43 GMT

ಉಡುಪಿ, ಸೆ.21: ಜಿಲ್ಲೆಯಲ್ಲಿ ಇಂದು ಹೊಸದಾಗಿ 73 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, 274 ಮಂದಿ ಸೋಂಕಿನಿಂದ ಗುಣಮುಕ್ತರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ ಇನ್ನಷ್ಟು ಇಳಿಮುಖದಲ್ಲಿದ್ದು 751 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಉಡುಪಿ ತಾಲೂಕಿನ 51 ವರ್ಷ ಪ್ರಾಯದ ಮಹಿಳೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ಗುಣಲಕ್ಷಣದೊಂದಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ನರಳಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಈ ಮಹಿಳೆ ಕಿಡ್ನಿ ಸಮಸ್ಯೆಯಿಂದಲೂ ಬಳಲುತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರಿಂದು ಮೃತಪಟ್ಟರು. ಇದರಿಂದ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ469ಕ್ಕೇರಿದೆ.
ದಿನದಲ್ಲಿ ಸೋಂಕು ದೃಢಪಟ್ಟ 73 ಮಂದಿಯಲ್ಲಿ 40 ಮಂದಿ ಪುರುಷರು ಹಾಗೂ 33 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 40 ಮಂದಿ ಉಡುಪಿ ತಾಲೂಕು, 11 ಮಂದಿ ಕುಂದಾಪುರ ಹಾಗೂ 22 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 8 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 65 ಮಂದಿಗೆ ವುನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಿನದಲ್ಲಿ ಸೋಂಕು ದೃಢಪಟ್ಟ 73 ಮಂದಿಯಲ್ಲಿ 40 ಮಂದಿ ಪುರುಷರು ಹಾಗೂ 33 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 40 ಮಂದಿ ಉಡುಪಿ ತಾಲೂಕು, 11 ಮಂದಿ ಕುಂದಾಪುರ ಹಾಗೂ 22 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 8 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 65 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ 274 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 74,640ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4130 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,860ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,00,218 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

5030 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಮಂಗಳವಾರ 5030 ಮಂದಿ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 1618 ಮಂದಿ ಮೊದಲ ಡೋಸ್ ಹಾಗೂ 3412 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 949 ಮಂದಿ ಮೊದಲ ಡೋಸ್ ಹಾಗೂ 2163 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 669 ಮಂದಿ ಮೊದಲ ಡೋಸ್ ಹಾಗೂ 1249 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8,75,932 ಮಂದಿಗೆ ಮೊದಲ ಡೋಸ್‌ನ್ನು, 3,70,498 ಮಂದಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಡಿಎಚ್‌ಓ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News