ಮಡಿಕೇರಿ ನಗರಸಭೆ : ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಹಾದಿ ಸುಗಮ

Update: 2021-09-21 16:38 GMT

ಮಡಿಕೇರಿ ಸೆ.21 : ಕಳೆದ 5 ತಿಂಗಳಿನಿಂದ ನಡೆಯದ ಮಡಿಕೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಇದೀಗ ಗ್ರೀನ್ ಸಿಗ್ನಲ್ ನೀಡಿದೆ. ಮೇ ತಿಂಗಳಿನಿಂದಲೇ ಮಡಿಕೇರಿ ನಗರಸಭೆಗೆ ಸದಸ್ಯರ ಆಯ್ಕೆ ಚುನಾವಣೆ ಮೂಲಕ ನಡೆದಿತ್ತಾದರೂ ಕೋವಿಡ್ ಹಿನ್ನೆಲೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸರ್ಕಾರ ಅಂಗೀಕಾರ ನೀಡಿರಲಿಲ್ಲ.

ಇತ್ತೀಚೆಗೆ ಶಾಸಕ ಕೆ.ಜಿ.ಬೋಪಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಗಮನ ಸೆಳೆದು  ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅವಕಾಶ ನೀಡುವಂತೆ ಸೂಚಿಸಿದ್ದರು. ಅಂತಿಮವಾಗಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಡಿಕೇರಿ ನಗರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ  ಅನುಮತಿ ನೀಡಲಾಗಿದೆ.

2-3 ದಿನಗಳಲ್ಲಿ ಈ ಸಂಬಂಧಿತ ಸೂಚನೆ ಜಿಲ್ಲಾಧಿಕಾರಿಗಳಿಗೆ ತಲುಪಲಿದೆ. ಜಿಲ್ಲಾಧಿಕಾರಿಗಳು 7 ದಿನಗಳೊಳಗಾಗಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ತಿಳಿದು ಬಂದಿದೆ. 

30 ತಿಂಗಳಿನಿಂದ ಮಡಿಕೇರಿ ನಗರಸಭೆಗೆ ಇರದಿದ್ದ ಅಧ್ಯಕ್ಷ, ಉಪಾಧ್ಯಕ್ಷರು  ಅಕ್ಟೋಬರ್ ಮೊದಲ ವಾರದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಂತೆಯೇ ನಗರಸಭೆಯ 23 ಸದಸ್ಯರೂ ಅಂದಿನಿಂದ ತಮ್ಮ ಅಧಿಕಾರದ ಹಕ್ಕು ಪಡೆಯಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News