ಮಹಿಳೆಯರಿಗೆ ಈ ವರ್ಷವೇ ಎನ್ ಡಿಎ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ

Update: 2021-09-22 06:45 GMT

ಹೊಸದಿಲ್ಲಿ: ಈ ವರ್ಷವೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಬುಧವಾರ ಆದೇಶ ನೀಡಿದ್ದು, ಪರೀಕ್ಷೆಯನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕೆಂಬ ಕೇಂದ್ರ ಸರಕಾರದ ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಎನ್ ಡಿಎಗೆ ಮೊದಲ ಮಹಿಳಾ ಅಭ್ಯರ್ಥಿಗಳು ಮುಂದಿನ ವರ್ಷದ ಮೇ ತಿಂಗಳಲ್ಲಿ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು ಎಂದು ಸರಕಾರ ಸೂಚಿಸಿದೆ.

ಆದಾಗ್ಯೂ, ಸುಪ್ರೀಂ ಕೋರ್ಟ್, ಈ ವರ್ಷದ ನವೆಂಬರ್ 14 ರಂದು ಪರೀಕ್ಷೆಗಳಿಗೆ ಅಧಿಸೂಚನೆಯನ್ನು ಹೊರಡಿಸುವಂತೆ ಕೇಂದ್ರ ಲೋಕ ಸೇವಾ ಆಯೋಗಕ್ಕೆ ಸೂಚಿಸಿತು.

"ಅವರು ಮೇ 2022 ರಲ್ಲಿ ಪರೀಕ್ಷೆಗೆ ಹಾಜರಾದರೆ ಜೂನ್ 2023 ರಲ್ಲಿ ಪ್ರವೇಶಾತಿ ನಡೆಯುತ್ತದೆ. ನಾವು ಒಂದು ವರ್ಷದವರೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ನಾವು ಹುಡುಗಿಯರಿಗೆ ಭರವಸೆ ನೀಡಿದ್ದೇವೆ. ನಾವು ಈಗ ಆ ಭರವಸೆಯನ್ನು ನಿರಾಕರಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News