ದ.ಕ. ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್‌ಗೆ ಆಯ್ಕೆ

Update: 2021-09-22 10:51 GMT
ಶಂಸುದ್ದೀನ್ ದಾರಿಮಿ

ಮಂಗಳೂರು, ಸೆ.22: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ನದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮದ್ರಸ ಅಧ್ಯಾಪಕರ ಒಕ್ಕೂಟವಾದ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್‌ನ ದ.ಕ.ಜಿಲ್ಲಾ ಸಮಿತಿಯ 2021-2022ನೇ ಸಾಲಿನ ವಾರ್ಷಿಕ ಮಹಾಸಭೆಯು ನಗರದ ಸಮಸ್ತ ಕಚೇರಿಯಲ್ಲಿ ಇತ್ತೀಚೆಗೆ ಜರುಗಿತು.

ಸಮಸ್ತ ಮುಫತ್ತಿಶ್ ಹನೀಫ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ಲತೀಫ್ ದಾರಿಮಿ ರೆಂಜಾಡಿ ಸಭೆಯನ್ನು ಉದ್ಘಾಟಿಸಿದರು.

ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಶಂಸುದ್ದೀನ್ ದಾರಿಮಿ ಕುಂಬ್ರ, ಉಪಾಧ್ಯಕ್ಷರಾಗಿ ಸಿದ್ಧೀಕ್ ಫೈಝಿ ಆತೂರು, ಅಬ್ದುಲ್ಲತೀಫ್ ದಾರಿಮಿ ರೆಂಜಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಜೊತೆ ಕಾರ್ಯದರ್ಶಿಗಳಾಗಿ ಕರೀಂ ದಾರಿಮಿ ಪುತ್ತೂರು, ಶರೀಫ್ ಮದನಿ ಸಜಿಪ, ಕೋಶಾಧಿಕಾರಿಯಾಗಿ ಇಬ್ರಾಹಿಂ ದಾರಿಮಿ ಕಡಬ, ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಸಿ.ಎಚ್. ಇಬ್ರಾಹಿಂ ಮುಸ್ಲಿಯಾರ್ ಸಾಲೆತ್ತೂರು, ಐಟಿ ಕೋರ್ಡಿನೇಟರ್ ಆಗಿ ಹಂಝ ಫೈಝಿ ಉಡುಪಿ, ಎಸ್‌ಕೆಎಸ್‌ಬಿವಿ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಫೈಝಿ ಮಂಗಳೂರು, ಸಂಚಾಲಕರಾಾಗಿ ಅಶ್ರಫ್ ಹನೀಫಿ ಉಪ್ಪಿನಂಗಡಿ, ಕುರುನ್ನುಗಳ್ ಉಸ್ತುವಾರಿಗಳಾಗಿ ಗಫೂರ್ ಹನೀಫಿ ವಿಟ್ಲ ಹಾಗೂ ಸಿರಾಜುದ್ದೀನ್ ಮದನಿ ಬಂಟ್ವಾಳ ಅವರನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News