ಬೆಂಗಳೂರು; ಲೈಂಗಿಕ ಕಿರುಕುಳ ಆರೋಪ: ಕ್ಯಾಬ್ ಚಾಲಕನ ಬಂಧನ

Update: 2021-09-22 13:03 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.22: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಕ್ಯಾಬ್ ಚಾಲಕನೋರ್ವನನ್ನು ಇಲ್ಲಿನ ಜೀವನ್‍ ಭೀಮಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದೇವರಾಜ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಘಟನೆ ನಡೆದ 24ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ತಡರಾತ್ರಿ ಮಹಿಳೆ ಇಲ್ಲಿನ ಮಲ್ಲೇಶ್‍ಪಾಳ್ಯಕ್ಕೆ ಹೋಗಲು ಕ್ಯಾಬ್ ನೋಂದಣಿ ಮಾಡಿದ್ದರು. ಈ ವೇಳೆ ಆಗಮಿಸಿದ ಚಾಲಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಂಬಂಧ ದೂರು ದಾಖಲಾಗಿತ್ತು.

ಈ ಸಂಬಂಧ ಜೀವನ್ ಭಿಮಾ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News