​ಮಲ್ಪೆ: ಬೀಚ್ ಸ್ವಚ್ಛತಾ ದಿನಾಚರಣೆ ಮತ್ತು ಸ್ವಚ್ಚತಾ ಕಾರ್ಯಕ್ರಮ

Update: 2021-09-22 15:18 GMT

ಉಡುಪಿ, ಸೆ.22: ಭಾರತ್ ಸ್ಕೌಟ್ಸ್-ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಘಟಕದ ವತಿಯಿಂದ ಬೀಚ್ ಸ್ವಚ್ಛತಾ ದಿನಾಚರಣೆಯು ಇತ್ತೀಚೆಗೆ ಮಲ್ಪೆ ಕಡಲ ತೀರದಲ್ಲಿ ನಡೆಯಿತು. ಕರಾವಳಿ ಕಾವಲು ಪೊಲೀಸ್ ಇಲಾಖೆ ಉಡುಪಿ, ಮಲ್ಪೆ ಬೀಚ್ ಅಭಿವೃದ್ದಿ ಮಂಡಳಿ ಸಹ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿದ್ದು, ಮಲ್ಪೆ ಬೀಚ್‌ನ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಮಲ್ಪೆ ಕರಾವಳಿ ಕಾವಲು ಪೊಲೀಸ್ ಪಡೆಯ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ ವಿ, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಗಣೇಶ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಬೆಂಗಳೂರಿನ ಶೃತಿ, ಜಿಲ್ಲಾ ಸಹಕಾರ್ಯದರ್ಶಿ ಡಾ.ಜಯರಾಮ್ ಶೆಟ್ಟಿಗಾರ್, ನಿತಿನ್ ಅಮೀನ್ ಹಾಗೂ ಸುಮನ್ ಶೇಖರ್ ಉಪಸ್ಥಿತರಿದ್ದರು.

ಕರ್ನಾಟಕ ಕರಾವಳಿಯಾದ್ಯಂತ ಮುಖ್ಯವಾಗಿ ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕುಂದಾಪುರ ತಾಲೂಕಿನ ಸಮುದ್ರ ತೀರದಲ್ಲಿ ಬೀಚ್ ಸ್ವಚ್ಚತೆ, ಬೀಚ್ ಪರಿಸರದ ಅಧ್ಯಯನ ಮತ್ತು ಬೀಚ್ ಸ್ವಚ್ಛತೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂಥ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಅಂದು ಆಯೋಜಿಸಲಾಗಿತ್ತು.

ವಿವಿಧ ಸರಕಾರಿ ಇಲಾಖೆಗಳು, ಸರಕಾರೇತರ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಸ್ಕೌಟ್ಸ್ ಗೈಡ್ಸ್, ರೋವರ್ಸ್, ರೇಂಜರ್ಸ್‌ನ ಪದಾಧಿಕಾರಿಗಳು ಕೂಡಿ ಇಂಥ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸ ಲಾಗುವುದು ಎಂದು ಡಾ. ಜಯರಾಮ ಶೆಟ್ಟಿಗಾರ್ ನುಡಿದರು.

52 ಭಾರತ್ ಸ್ಕೌಟ್ಸ್ ಗೈಡ್ಸ್ನ ರೋವರ್ಸ್ ಮತ್ತು ರೇಂಜರ್ಸ್‌ಗಳಲ್ಲದೇ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬೀಚ್ ಸ್ವಚ್ಚತಾ ಕಾರ್ಯಕ್ರಮ ದಲ್ಲಿ ಭಾಗವಹಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News