ದಸರಾ-ದೀಪಾವಳಿ ಪ್ರಯುಕ್ತ 1000 ಹೆಚ್ಚುವರಿ ಬಸ್ ವ್ಯವಸ್ಥೆ

Update: 2021-09-22 15:22 GMT

ಬೆಂಗಳೂರು, ಸೆ.23: ಕ.ರಾ.ರ.ಸಾ.ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಸರಾ ಹಾಗೂ ದೀಪಾವಳಿ ಹಬ್ಬದ ದಿನಗಳಲ್ಲಿ ಬೆಂಗಳೂರಿನಿಂದ ರಾಜ್ಯದ ಒಳಗಿನ ಪ್ರಮುಖ ಸ್ಥಳಗಳಿಗೆ ಮತ್ತು ಅಂತರರಾಜ್ಯದ ಪ್ರಯಾಣಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ದಸರಾ ಹಬ್ಬದ ಪ್ರಯುಕ್ತ ಅ.13ರಿಂದ ಅ.23ರವರೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಅ.29ರಿಂದ ನ.07ರವರೆಗೆ 1000 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿಗೆ: ಬೆಂಗಳೂರಿನಿಂದ ರಾಜ್ಯದ ಪ್ರಮುಖ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಸ್ಥಳಗಳಿಗೆ ಮತ್ತು ನೆರೆರಾಜ್ಯದ ಪ್ರಮುಖ ಸ್ಥಳಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೆ ಹಾಗೂ ಅಲ್ಲಿಂದ ಬೆಂಗಳೂರಿಗೆ ಸಾರ್ವಜನಿಕ ವಾಹನಗಳು ಕಾರ್ಯಾಚರಣೆ ಮಾಡುತ್ತವೆ.

ಈ ಹೆಚ್ಚುವರಿ ವಿಶೇಷ ಸಾರಿಗೆಗಳ ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಸಾರ್ವಜನಿಕರಿಗೆ ಕರಾರಸಾನಿಗಮದ ವೆಬ್‍ಸೈಟ್ www.ksrtc.karnataka.gov. in   ಅಥವಾ ಕರ್ನಾಟಕ ಮತ್ತು ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News