ಬೆಂಗಳೂರು: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಕನ್ನಡ ಶಾಲಾ ಸಂಘಟನೆಗಳ ಧರಣಿ ಸತ್ಯಾಗ್ರಹ

Update: 2021-09-22 16:36 GMT

ಬೆಂಗಳೂರು, ಸೆ.22: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಕನ್ನಡ ಶಾಲಾ ಸಂಘಟನೆಗಳು ಬುಧವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು. 

ನಮ್ಮ ಕನ್ನಡ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಖಾಸಗಿ ಶಾಲೆಗಳ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟ ಹಾಗೂ ರುಪ್ಸ ಸಂಘಟನೆ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ. 

ಯಾದಗಿರಿ, ಕಲಬುರಗಿ, ಬೆಳಗಾವಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳಿಂದ ಶಿಕ್ಷಕರು ಆಗಮಿಸಿದ್ದಾರೆ. ಈ ಭಾಗದಲ್ಲಿನ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಹಾಗೂ ಈ ಭಾಗದಲ್ಲಿ ಶಾಲೆ ತೆರೆಯಲು ಸರಕಾರವೇ ಹಿಂದೇಟು ಹಾಕಿದೆ ಎಂದು ಶಿಕ್ಷಕರು ದೂರಿದರು. 

1995ರ ನಂತರದಲ್ಲಿ ಪ್ರಾರಂಭವಾದ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾನಿರತರು, ಈ ಬೇಡಿಕೆಯನ್ನು ಸರಕಾರ ಈಡೇರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.     
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News