ಕೋವಿಡ್ ವಾರಿಯರ್ಸ್ ಪ್ರತಿಭಟನೆ: ಸೇವಾ ಭದ್ರತೆ ಒದಗಿಸಲು ಆಗ್ರಹ

Update: 2021-09-22 17:07 GMT

ಬೆಂಗಳೂರು, ಸೆ.22: ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸಿರುವ ಆರೋಗ್ಯ ಇಲಾಖೆ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಯಿತು.

ಬುಧವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘ(ಎಐಯುಟಿಯುಸಿ) ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಐಯುಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್, ಕೋವಿಡ್-19 ಸಂದರ್ಭದಲ್ಲಿ ವಾರಿಯರ್ಸ್‍ಗಳಾಗಿ ತಾತ್ಕಾಲಿಕವಾಗಿ ಆರೋಗ್ಯ ಇಲಾಖೆಯಡಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ನೂರಾರು ನೌಕರರು ಹಗಲು ರಾತ್ರಿ ಎನ್ನದೇ ದುಡಿದಿದ್ದಾರೆ. ಹೀಗಾಗಿ, ಸರಕಾರ ಅವರ ಸೇವೆಯನ್ನು ಇನ್ನಷ್ಟು ಕಾಲ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಹೇಶ್ ನಾಡಗೌಡ, ಎಐಯುಟಿಯುಸಿ ರಾಜ್ಯ ಸೆಕ್ರೆಟೇರಿಯೆಟ್ ಸದಸ್ಯರಾದ ಚಂದ್ರಶೇಖರ್ ಮೇಟಿ, ಹನುಮೇಶ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News