ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ: ವೆರೋನಿಕ

Update: 2021-09-23 14:22 GMT

ಭಟ್ಕಳ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ ಎಂದು ಕೆಪಿಸಿಸಿ ಸದಸ್ಯೆ ಹಾಗೂ ಜಿಲ್ಲಾ ಕಾಂಗ್ರೆಸ್ ವೀಕ್ಷಕಿ ವೆರೋನಿಕ ಕರ್ನೀಲಿಯೊ ಹೇಳಿದರು.

ಅವರು ನಗರದ ಅರ್ಬನ್ ಬ್ಯಾಂಕ್ ಹಾಲ್ ನಲ್ಲಿ ಭಟ್ಕಳ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಮಹಾತ್ಮಾ ಗಾಂದಿ ಗ್ರಾಮ ಸ್ವರಾಜ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ನೆನಪನ್ನು ಚಿರವಾಗಿರಿಸಲು ಕೆ.ಪಿ.ಸಿಸಿ. ಕರ್ನಾಟಕದೆಲ್ಲಡೆ ಗಾಂದೀಜಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದ ಅವರು, ದೇಶಕ್ಕೆ ಸಾತಂತ್ರ್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಪ್ರಮುಖ ಪಾತ್ರವನ್ನು ವಹಿಸಿದ್ದು ಅವರನ್ನು ಸ್ಮರಿಸಿಕೊಳ್ಳಲು ಇದೊಂದು ಅವಕಾಶವಾಗಿದೆ ಎಂದರು.

ಪಕ್ಷದ  ಕಾರ್ಯಕರ್ತರು ಪ್ರತಿಯೊಂದು ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಲಿದ್ದಾರೆ ಎಂದರಲ್ಲದೇ ಈ ದೇಶದಲ್ಲಿ  ಭಾವನಾತ್ಮಕವಾಗಿ ಜನರ ಮನಸ್ಸನ್ನು ಕೆಡಿಸಿ  ಅಧಿಕಾರಕ್ಕೆ  ಬಂದ ಬಿಜೆಪಿ ಪಕ್ಷದ  ವೈಪಲ್ಯಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್ ಪಕ್ಷವನ್ನು ಮೊತ್ತೊಮ್ಮೆ ಅಧಿಕಾರಕ್ಕೆ ತರಲಿದ್ದೇವೆ ಎಂದರು.

ಮಾಜಿ ಶಾಸಕ ಜೆ.ಡಿ.ನಾಯ್ಕ ಮಾತನಾಡಿ, ಈ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ ನಾಯಕರಾದ ಮಹಾತ್ಮ ಗಾಂಧಿ, ನೆಹರೂ, ಸುಭಾಷಚಂದ್ರ ಬೋಸ್ ಮತ್ತು ಅನೇಕರನ್ನು ಸ್ಮರಿಸುವುದಕ್ಕಾಗಿ ಪ್ರತಿ ಗ್ರ್ರಾಮ ಪಂಚಾಯತ ಮಟ್ಟದಲ್ಲಿ  ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಪ್ರತಿ ಗ್ರಾಮಕ್ಕೆ  ತೆರಳಿ ಕಾಂಗ್ರೆಸ್ ಪಕ್ಷದ ಸಾಧೆನಯನ್ನು ಜನರಿಗೆ ತಿಳಿಸಿಕೊಡಬೇಕು, ಸುಳ್ಳಿನ ಸರದಾರ ಪಕ್ಷವಾದ ಬಿಜೆಪಿಯ ಡೋಂಗಿತನವನ್ನು ಜನರಿಗೆ ತಿಳಿಸಿ  ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಯತ್ನಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಮಂಕಾಳ ವೈದ್ಯ ಮಾತನಾಡಿ ಈ ಕಾರ್ಯಕ್ರಮವನ್ನು ಕೆ.ಪಿ.ಸಿ.ಸಿ. ಅದ್ಯಕ್ಷರಾದ  ಡಿ.ಕೆ. ಶಿವಕುಮಾರ್  ಅವರ ಮಾರ್ಗದರ್ಶನದಂತೆ ಮಾಡುತ್ತಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ನಾಯಕರನ್ನು ನೆನೆಯಲು ಪ್ರತಿಯೊಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ನಮ್ಮ ಕಾರ್ಯಕರ್ತರು ಕಾಂಗ್ರೆಸ್ ನ  ಸಾಧನೆ ಮತ್ತು ಅಬಿವೃದ್ದಿಯನ್ನು ಗ್ರಾಮದ ಪ್ರತಿಯೊಂದು ಮನೆಗೂ ಪ್ರಚಾರಪಡಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಕೆ. ಭಾಗ್ವತ, ಜಲ್ಲಾ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಸುಜಾತ ಗಾಂವಕರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಜೀದ್ ಪಕ್ಷದ ಬೆಳವಣಿಗೆಯ ಬಗ್ಗೆ ಮಾತನಾಡಿದರು. 

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಸಿಂಧೂ ಭಾಸ್ಕರ, ಅಲ್ಬರ್ಟ ಡಿಕೋಸ್ಟಾ, ತಾ.ಪಂ ಮಾಜಿ ಅಧ್ಯಕ್ಷ ಈಶ್ವರ ನಾಯ್ಕ, ಜಯಲಕ್ಷ್ಮೀ ಗೊಂಡ, ಅರ್ಭನ್ ಬ್ಯಾಂಕ್ ಅಧ್ಯಕ್ಷ ಇಮ್ತಿಯಾಝ್  ಮತ್ತಿತರರು ಉಪಸ್ಥಿತರಿದ್ದರು.  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News