ದ.ಕ.: ಕೋವಿಡ್ಗೆ ಮೂವರು ಬಲಿ; 105 ಮಂದಿಗೆ ಸೋಂಕು
Update: 2021-09-23 14:31 GMT
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 105 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. 148 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.0.99ರಷ್ಟಿದೆ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,13,620ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,10,897 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 1080 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1643 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.