​ಉಡುಪಿ: ಗುರುವಾರ 69 ಮಂದಿಗೆ ಕೊರೋನ ಸೋಂಕು ದೃಢ

Update: 2021-09-23 14:40 GMT
ಸಾಂದರ್ಭಿಕ ಚಿತ್ರ

ಉಡುಪಿ, ಸೆ.23: ಜಿಲ್ಲೆಯಲ್ಲಿ ಗುರುವಾರ ಒಟ್ಟು 69 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು 147 ಮಂದಿ ಸೋಂಕಿನಿಂದ ಗುಣಮುಕ್ತರಾದರೆ, ಇನ್ನೂ ಸಕ್ರಿಯರಾಗಿರುವವರ ಸಂಖ್ಯೆ 450ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಯಾರೂ ಕೊರೋನ ಸೋಂಕಿಗೆ ಬಲಿಯಾಗಿಲ್ಲ. ಹೊರಜಿಲ್ಲೆಯ ಒಬ್ಬ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 53 ಮಂದಿ ಸೋಂಕಿಗೆ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ ಜಿಲ್ಲೆಯ 11 ಮಂದಿ ಹಾಗೂ ಹೊರಜಿಲ್ಲೆಯ 42 ಮಂದಿ ಸೇರಿದ್ದಾರೆ. ಒಟ್ಟು ಆರು ವುಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.ದಿನದಲ್ಲಿ ಸೋಂಕು ದೃಢಪಟ್ಟ 69 ಮಂದಿಯಲ್ಲಿ 36 ಮಂದಿ ಪುರುಷರು ಹಾಗೂ 33 ಮಂದಿ ಮಹಿಳೆಯರು. ಇವರಲ್ಲಿ 43 ಮಂದಿ ಉಡುಪಿ ತಾಲೂಕು, 8 ಮಂದಿ ಕುಂದಾಪುರ ಹಾಗೂ 17 ಮಂದಿ ಕಾರ್ಕಳ ತಾಲೂಕಿ ನವರು. ಇವರಲ್ಲಿ 13 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 56 ಮಂದಿಗೆ ವುನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಿನದಲ್ಲಿ ಸೋಂಕು ದೃಢಪಟ್ಟ 69 ಮಂದಿಯಲ್ಲಿ 36 ಮಂದಿ ಪುರುಷರು ಹಾಗೂ 33 ಮಂದಿ ಮಹಿಳೆಯರು. ಇವರಲ್ಲಿ 43 ಮಂದಿ ಉಡುಪಿ ತಾಲೂಕು, 8 ಮಂದಿ ಕುಂದಾಪುರ ಹಾಗೂ 17 ಮಂದಿ ಕಾರ್ಕಳ ತಾಲೂಕಿ ನವರು. ಇವರಲ್ಲಿ 13 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 56 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ 147 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 75,055ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 5206 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,976ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,11,330 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News