ಕ್ಲಾಕ್ ಟವರ್ ರಸ್ತೆಯಲ್ಲಿ ಏಕಮುಖ ಸಂಚಾರ: ಮಂಗಳೂರು ಪೊಲೀಸ್ ಆಯುಕ್ತ

Update: 2021-09-23 14:50 GMT

ಮಂಗಳೂರು, ಸೆ.23: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್ ವೃತ್ತ- ಎ.ಬಿ.ಶೆಟ್ಟಿ ವೃತ್ತ- ಹ್ಯಾಮಿಲ್ಟನ್ ವೃತ್ತ- ರಾವ್ ಆ್ಯಂಡ್ ರಾವ್ ವೃತ್ತ- ಕ್ಲಾಕ್ ಟವರ್ ವೃತ್ತದವರೆಗಿನ ರಸ್ತೆಯನ್ನು ಏಕಮುಖ ಸಂಚಾರದ ರಸ್ತೆಯನ್ನಾಗಿ ಮಾರ್ಪಾಡಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಕ್ಲಾಕ್ ಟವರ್ ವೃತ್ತದಿಂದ ಎ.ಬಿ.ಶೆಟ್ಟಿ ವೃತ್ತದವರೆಗೆ ಹೋಗುವ 550 ಮೀ. ಉದ್ದದ ಮೈದಾನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಘೋಷಿಸಲಾಗಿದೆ. ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎ.ಬಿ. ಶೆಟ್ಟಿ ವೃತ್ತದಿಂದ ಹ್ಯಾಮಿಲ್ಟನ್ ವೃತ್ತದವರೆಗೆ ಹೋಗುವ 250 ಮೀಟರ್ ಉದ್ದದ ಮೈದಾನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಘೋಷಿಸಲಾಗಿದೆ. ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಹ್ಯಾಮಿಲ್ಟನ್ ವೃತ್ತದಿಂದ ರಾವ್ ಆ್ಯಂಡ್ ರಾವ್ ವೃತ್ತದವರೆಗೆ ಹೋಗುವ 250 ಮೀಟರ್ ಉದ್ದದ ಮೈದಾನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಘೋಷಿಸಲಾಗಿದೆ. ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ರಾವ್ ಆ್ಯಂಡ್ ರಾವ್ ವೃತ್ತದಿಂದ ಕ್ಲಾಕ್ ಟವರ್ ವೃತ್ತದವರೆಗೆ ಹೋಗುವ 450 ಮೀಟರ್ ಉದ್ದದ ಮೈದಾನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಘೋಷಿಸಲಾಗಿದೆ. ಈ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಆದೇಶದನ್ವಯ ಮೇಲ್ಕಂಡ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಅಳವಡಿಸುವ ಕುರಿತು ಹಾಗೂ ಆ ಆದೇಶ ಅನುಷ್ಠಾನಗೊಳಿಸಲು ಮಂಗಳೂರು ಸಂಚಾರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News