ಕುಂದಾಪುರ ಪುರಸೆಯಿಂದ ಪೌರ ಕಾರ್ಮಿಕರ ದಿನಾಚರಣೆ

Update: 2021-09-23 15:50 GMT

ಕುಂದಾಪುರ, ಸೆ.23:ಕುಂದಾಪುರ ಪುರಸಭೆಯ ವತಿಯಿಂದ ಇಂದು ಪೌರ ಕಾರ್ಮಿಕರ ದಿನಾಚರಣೆ ಕುಂದಾಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಅರೋಗ್ಯವನ್ನು ಲೆಕ್ಕಿಸದೆ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಪೌರ ಕಾರ್ಮಿಕರು ತಮ್ಮ ಅರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಬೇಕು. ಅದೇ ರೀತಿ ಕುಟುಂಬದ ಉಳಿದ ಸದಸ್ಯರ ಆರೋಗ್ಯದ ಕುರಿತೂ ಕಾಳಜಿ ವಹಿಸಬೇಕು ಎಂದರು.

ಪೌರಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿ ದುಡಿಯಬೇಕೆಂದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಅವರು ಮುಂದೆ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಹೊಂದುವಂತೆ ನೋಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಹನ್ನೊಂದು ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಅಲ್ಲದೆ ಬಂಟ್ವಾಳ ಪುರಸಭೆ ಹಿರಿಯ ಅರೋಗ್ಯ ನಿರೀಕ್ಷಕರಾಗಿ ನಿಯುಕ್ತಿಗೊಂಡ ಶರತ್ ಎಸ್. ಖಾರ್ವಿ ಅವರನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ನಾಗರಾಜ್, ಪುರಸಭೆ ಮಾಜಿ ಅಧ್ಯಕ್ಷೆ ದೇವಕಿ ಸಣ್ಣಯ್ಯ ಹಾಗೂ ಪುರಸಭೆ ಸದಸ್ಯರಾದ ಅಬ್ಬು ಮೊಹಮ್ಮದ್, ಚಂದ್ರಶೇಖರ ಖಾರ್ವಿ, ಪ್ರಭಾಕರ್,ಅಷ್ಪಕ್, ಶಕುಂತಲಾ, ಗುರುರಾಜ್, ಮಾಜಿ ಸದಸ್ಯ ರಾಜೇಶ್ ಕಾವೇರಿ, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News