ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ; ನಾಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ
Update: 2021-09-23 22:17 IST
ಬೆಂಗಳೂರು, ಸೆ. 23: ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಪ್ರಜಾಪ್ರಭುತ್ವ: ಸಂಸದೀಯ ಮೌಲ್ಯಗಳ ರಕ್ಷಣೆ' ವಿಷಯ ಕುರಿತು ನಾಳೆ(ಸೆ.24) ವಿಧಾನಸಭೆ ಸಭಾಂಗಣದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಾಳೆ ಮಧ್ಯಾಹ್ನ 2:30ಕ್ಕೆ ಓಂ ಬಿರ್ಲಾ ಅವರು ಭಾಷಣ ಮಾಡಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.