×
Ad

ಕುದುರೆಮುಖ: ಮೂಲಭೂತ ಸೌಕರ್ಯ ಒದಗಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2021-09-23 22:18 IST

ಮಂಗಳೂರು, ಸೆ.23: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 9 ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಪರಿಶಿಷ್ಟ ಪಂಗಡ ಕಾಲನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂಬತ್ತು ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕು.

ಈ ಬಗ್ಗೆ ಯಾವುದೇ ರೀತಿಯ ದೂರುಗಳು ಕೇಳಿ ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುದ್ರನ್, ಸಹಾಯಕ ಆಯುಕ್ತ ಮದನ್ ಮೋಹನ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹೇಮಚಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News