ಕೆಕೆಆರ್ ನಾಯಕ ಮೊರ್ಗನ್ ಗೆ 24 ಲಕ್ಷ ರೂ. ದಂಡ

Update: 2021-09-24 07:12 GMT

ದುಬೈ: ಅಬುಧಾಬಿಯಲ್ಲಿ ಗುರುವಾರ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 34ನೇ  ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗೆ ದಂಡ ವಿಧಿಸಲಾಗಿದೆ.

ಸೆಪ್ಟೆಂಬರ್ 23 ರಂದು ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಕೆಕೆಆರ್ ನಾಯಕ ಇಯಾನ್ ಮೋರ್ಗನ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು ಕೆಕೆಆರ್ ನ ಆಡುವ 11ರ ಬಳಗದ  ಉಳಿದ ಸದಸ್ಯರು ತಲಾ 6 ಲಕ್ಷ ರೂ. ಅಥವಾ ತಮ್ಮ ವೈಯಕ್ತಿಕ ಪಂದ್ಯ ಶುಲ್ಕದ ಶೇ. 25 ರಷ್ಟು ದಂಡ ವಿಧಿಸಲಾಗಿದೆ.

"ಸೆಪ್ಟೆಂಬರ್ 23 ರಂದು ಅಬುಧಾಬಿಯ ಝಾಯೆದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ 2021 ರ ವಿವೋ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ ದಂಡ ವಿಧಿಸಲಾಗಿದೆ" ಎಂದು ಅಧಿಕೃತ ಐಪಿಎಲ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

"ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ತಂಡದ ಎರಡನೇ ಪ್ರಮಾದವಾಗಿದ್ದು, ನಿಧಾನಗತಿಯ ಬೌಲಿಂಗ್ ಆರೋಪಕ್ಕೆ ಸಂಬಂಧಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮೋರ್ಗನ್‌ಗೆ  24 ಲಕ್ಷ ರೂ. ದಂಡ ವಿಧಿಸಲಾಗಿದೆ’’ ಎಂದು ಪ್ರಕಟನೆಯೊಂದರಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News