ಕುಂಬಳೆ: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ
Update: 2021-09-24 14:22 IST
ಕಾಸರಗೋಡು, ಸೆ.24: ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೆಎಸ್ ಇಬಿ ನೌಕರನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.
ಕುಂಬಳೆ ಕಚೇರಿಯ ನೌಕರ ರತೀಶ್ (43) ಮೃತಪಟ್ಟವರು. ಜೊತೆಗಿದ್ದ ಇನ್ನೋರ್ವ ನೌಕರ ರಾಘವ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯುತ್ ಸಂಪರ್ಕ ದುರಸ್ತಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಇಬ್ಬರು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ರತೀಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆನ್ನಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.